Ad imageAd image

ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ, ರಾಜೀನಾಮೆ ನೀಡಿ : ಬಿಜೆಪಿ ಟ್ವೀಟ್

Bharath Vaibhav
ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ, ರಾಜೀನಾಮೆ ನೀಡಿ : ಬಿಜೆಪಿ ಟ್ವೀಟ್
WhatsApp Group Join Now
Telegram Group Join Now

ಬೆಂಗಳೂರು : ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಿ, ತನಿಖೆ ಎದುರಿಸಿ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದೆ.

ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ.. ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ.

ರಾಜೀನಾಮೆ ನೀಡಿ, ತನಿಖೆ ಎದುರಿಸಿ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಜಯತೆ, ಜಯತೆ, ಸತ್ಯಮೇವ ಜಯತೆ!! ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ

ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು.

ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ. ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!