ಬಿಹಾರ : ಸಹೋದರಿಯ ಮಗನ ಫ್ರೀ ಫೈರ್ ಗೇಮ್ ಚಟಕ್ಕೆ ಇಡೀ ಕುಟುಂಬವೇ ಬಲಿಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್ನ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತರನ್ನು ತಾಯಿ ಜಿ.ಆರ್.ಸುಮಂಗಲಾ (78), ಮಗ ಜಿ.ಆರ್.ನಾಗಪ್ರಸಾದ್ (50) ಹಾಗೂ ಆಕೆಯ ಇಬ್ಬರು ಪುತ್ರಿಯರಾದ ಜಿ.ಆರ್.ಶಿಲ್ಪಾ (48) ಹಾಗೂ ಜಿ.ಆರ್.ಶ್ರುತಾ (43) ಎಂದು ಗುರುತಿಸಲಾಗಿದೆ.




