ಅಹಮದಾಬಾದ್: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನದಲ್ಲಿ 270 ಜನ ಸಾವನ್ನಪ್ಪಿದ ಐದು ದಿನಗಳ ನಂತರ, ಡಿಎನ್ಎ ಹೊಂದಾಣಿಕೆಯ ಮೂಲಕ ಇದುವರೆಗೆ 135 ಜನರನ್ನು ಗುರುತಿಸಲಾಗಿದೆ ಮತ್ತು 101 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
“ಇಂದು ಬೆಳಗ್ಗೆವರೆಗೆ 135 ಡಿಎನ್ಎ ಮಾದರಿಗಳನ್ನು ಹೊಂದಿಸಲಾಗಿದೆ ಮತ್ತು 101 ಶವಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಈ 101 ಮೃತರಲ್ಲಿ ಐದು ಮಂದಿ ವಿಮಾನದಲ್ಲಿ ಇರಲಿಲ್ಲ” ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ವರದಿಗಾರರಿಗೆ ತಿಳಿಸಿದ್ದಾರೆ.
ಶೀಘ್ರದಲ್ಲೇ ಉಳಿದ ಶವಗಳನ್ನು ಅವರ ಪ್ರೀತಿಪಾತ್ರರಿಗೆ ಹಸ್ತಾಂತರಿಸಲಾಗುವುದು. ಇನ್ನು ಐದು ಕುಟುಂಬಗಳು ಪ್ರಸ್ತುತ ಆಸ್ಪತ್ರೆ ಆಡಳಿತದೊಂದಿಗೆ ಸಂಪರ್ಕದಲ್ಲಿವೆ. ಹೆಚ್ಚುವರಿಯಾಗಿ 17 ಕುಟುಂಬಗಳು ಡಿಎನ್ಎ ವಿಶ್ಲೇಷಣೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ ಎಂದು ಡಾ. ಜೋಶಿ ಅವರು ಹೇಳಿದ್ದಾರೆ.




