ಬಳ್ಳಾರಿ:ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ವತಿಯಿಂದ ಎಫ್‌ಡಿಎ ಹುದ್ದೆಗಳ ಭರ್ತಿಗಾಗಿ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆ ಬಳ್ಳಾರಿಯಲ್ಲಿ ಅಭ್ಯರ್ಥಿಗಳ ಕಾಲುಗೆಜ್ಜೆ ಮತ್ತು ಕೈಯಲ್ಲಿ ಕತ್ತಲ್ಲಿದ್ದ ಶಿವದಾರ ಕಟ್ ಮಾಡಿ ಒಳಗೆ ಕಳುಹಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ಆಯೋಜಿಸಲಾಗಿತ್ತು ಬೆಳಗ್ಗೆಯಿಂದಲೇ ಅಭ್ಯರ್ಥಿಗಳು ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆಯಲು ಸಿದ್ಧರಾಗಿದ್ರು. ಈ ವೇಳೆ
ಕೆಲ ವಿದ್ಯಾರ್ಥಿನಿಯರ ಕಾಲು ಗೆಜ್ಜೆ ತೆಗೆಯುವಂತೆ ಸೂಚನೆ ನೀಡಿದ ಹಿನ್ನೆಲೆ ವಿದ್ಯಾರ್ಥಿನಿಯರು ಕಾಲ್ಗಜ್ಜೆ ತೆಗೆದರು. ಇದರ ಜೊತೆಗೆ ಕೈಯಲ್ಲಿದ್ದ ಮತ್ತು ಕತ್ತಿನಲ್ಲಿದ್ದ ಶಿವದಾರವನ್ನು ಕಟ್ ಮಾಡಲಾಯಿತು. ಕೆಲ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರಾದ್ರೂ ಪರೀಕ್ಷೆ ಸಮಯದವಾದ ಹಿನ್ನೆಲೆ ಎಲ್ಲರೂ ಒಳಗೆ ಹೋದ್ರು.
ಇನ್ನೂ ಪರೀಕ್ಷೆ ಸುಗಮವಾಗಿ ನಡೆಯುವಂತೆ ಪೊಲೀಸ್ ಭದ್ರತೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳಿಲ್ಲದೆ ಪರೀಕ್ಷೆ ಯಶಸ್ವಿಯಾಗಿ ಸಂಪನ್ನವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು




