ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಇತ್ತ ಬಿಜೆಪಿಯು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಲು ಸಂಪೂರ್ಣವಾಗಿ ಸಜ್ಜಾಗಿದೆ. ಇದೀಗ ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಗ್ಯಾರಂಟಿಯಿಂದಾಗಿ ಕಾಂಗ್ರೆಸ್ ಬಿಕ್ಷಾ ಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ ಎಂದರು.
ಈ ಬಗ್ಗೆ ಮಾತನಾಡಿದ ಅವರು,ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೋ ಡಿಕ್ಕಿನತ್ತ ಆಗುತ್ತಿದೆ. ಸಿಎಂ ಸಿದ್ದರಾಮಯ್ಯ ನವರ ಸರ್ಕಾರ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ. ಅಷ್ಟೇ ಅಲ್ಲದೆ ಈ ಬಗ್ಗೆ ಧ್ವನಿ ಎತ್ತಿದ್ದ ರಾಜ್ಯಪಾಲರು ಹಲವು ಅಧಿಕಾರ ಮೊಟಕು ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯಪಾಲರಿಗೆ ರಾಜ್ಯ ಸರ್ಕಾರ ಅಪಮಾನ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇತಿಹಾಸದಲ್ಲಿ ಇಂತಹ ಘಟನೆ ಇದೇ ಮೊದಲ ಬಾರಿಗೆ ನಡೆಯುತ್ತಿದೆ ಎಂದು ಆರ್ ಅಶೋಕ್ ಕಿಡಿಕಾರಿದರು. ಜೊತೆಗೆ ಮಸೂದೆಯ ವಿಚಾರವಾಗಿ ರಾಜ್ಯಪಾಲರು ಪ್ರಶ್ನೆ ಕೇಳಿದರೆ, ರಾಜ್ಯ ಸರ್ಕಾರ ಉತ್ತರ ನೀಡುವ ಬದಲು ಬೊಬ್ಬೆ ಹೊಡೆಯುತ್ತಿದೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತಿಲ್ಲ, ಗ್ಯಾರಂಟಿಗಳಿಗಾಗಿ ಸರ್ಕಾರ ಕೋಟಿ ಕೋಟಿ ಸಾಲ ಮಾಡಿಕೊಂಡಿದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಬಿಕ್ಷಾ ಪಾತ್ರೆ ಹಿಡಿಯುವ ಸ್ಥಿತಿಗೆ ಬಂದು ನಿಂತಿದೆ ಎಂದು ಆರ್ ಅಶೋಕ್ ಆಕ್ರೋಶ ಹೊರಹಾಕಿದರು.




