Ad imageAd image

ಸರ್ಕಾರದ ತಪ್ಪಿಗೆ ಅಧಿಕಾರಿಗಳ ತಲೆದಂಡ : ಎಡಿಜಿಪಿ ಸೇರಿ ಹಲವರ ತಲೆದಂಡ

Bharath Vaibhav
ಸರ್ಕಾರದ ತಪ್ಪಿಗೆ ಅಧಿಕಾರಿಗಳ ತಲೆದಂಡ : ಎಡಿಜಿಪಿ ಸೇರಿ ಹಲವರ ತಲೆದಂಡ
WhatsApp Group Join Now
Telegram Group Join Now

ಬೆಂಗಳೂರು: ನಿನ್ನೆ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 47 ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇದೀಗ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಗುರುವಾರ ಸಂಪುಟ ಸಭೆ ನಡೆಯುತ್ತೆ.

ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ನಿನ್ನೆಯ ಘಟನೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಉಳಿದ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ನ್ನೆ ನಡೆದ ಹಿತಕರ ಘಟನೆ ಬಗ್ಗೆ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಗಂಭೀರವಾಗಿ ಚರ್ಚೆ ಮಾಡಲಾಗಿದೆ. ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ತನಿಖೆಗೆ ಏಕ ಸದಸ್ಯ ಆಯೋಗ ರಚಿಸಲಾಗಿದೆ.

ಆರ್‌ಸಿಬಿ, DNA ಇವೆಂಟ್ ಮ್ಯಾನೇಜ್ಮೆಂಟ್, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಮೇಲೆ ಕೇಸ್ ದಾಖಲಿಸಿದ್ದು, ಇವುಗಳನ್ನು ಪ್ರತಿನಿಧಿಸುವವರ ಮೇಲೆ ಕೇಸು ದಾಖಲಿಸಿ, ಬಂಧಿಸಲಾಗುವುದು, ಇವರ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್, ಸ್ಟೇಷನ್ ಹೌಸ್ ಆಫೀಸರ್, ಸೆಂಟ್ರಲ್ DCP, ACP, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!