ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಗಾದಿ ಗುದ್ದಾಟ ಜೋರಾಗಿದ್ದು ಒಳಗೊಳಗೆ ರಾಜಕೀಯ ಕಿತ್ತಾಟ ಕಾವೇರುತ್ತಿದೆ. ಹೀಗಾಗಿ ಪಕ್ಷದಲ್ಲಿನ ಈ ಆಂತರಿಕ ಕಚ್ಚಾಟವನ್ನು ಶಮನ ಮಾಡಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಬೇಗುದಿ ಇರುವುದು ಸತ್ಯ. ಒಂದುವೇಳೆ ಇದನ್ನು ಬೇಗ ಬಗೆಹರಿಸಿಕೊಳ್ಳದಿದ್ದಲ್ಲಿ ಮುಂಬರುವ ದಿನಗಳಲ್ಲಿ ಇದು ಪಕ್ಷದ ಸಂಘಟನೆಯ ಮೇಲೆ ಪರಿಣಾಮ ಬೀರಲಿದೆ.
ಮುಂದಿನ ಚುನಾವಣೆಗಳಲ್ಲಿ ಕೂಡ ಸರ್ಕಾರದ ಆಂತರಿಕ ಗೊಂದಲ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.
ಹೀಗಾಗಿ ಈ ಎಲ್ಲಾ ಅಂಶಗಳನ್ನು ಸ್ಕೂಕ್ಷ್ಮವಾಗಿ ಪರಿಗಣಿಸಿ ನಮ್ಮ ಹೈಕಮಾಂಡ್ ಆದಷ್ಟು ಬೇಗ ಈ ಅಸಮಾಧಾನಗಳನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.
ಇನ್ನು ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ.ಹೀಗಾಗಿ ಸಿಎಂ ಡಿಸಿಎಂ ಇದನ್ನು ಬಗೆಹರಿಸಿಕೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.




