Ad imageAd image

ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್ 

Bharath Vaibhav
ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್ 
WhatsApp Group Join Now
Telegram Group Join Now

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.

ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ, ಉಭಯ ವಕೀಲರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿತು.

ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡಿದರು.

ದೂರುದಾರರ ಪರ ವಕೀಲರು ಕೂಡ ವಾಡ ಮಂಡನೆ ಮಾಡಿದ್ದಾರೆ. ಸುದೀರ್ಘ ವಾದಮಂಡನೆ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ಸೆ.2 ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!