Ad imageAd image

ರಾಜ್ಯ ಸರ್ಕಾರಕ್ಕೆ ಮುಖಭಂಗ : ಜನೌಷಧಿ ಕೇಂದ್ರಗಳ ಬಂದ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

Bharath Vaibhav
ರಾಜ್ಯ ಸರ್ಕಾರಕ್ಕೆ ಮುಖಭಂಗ : ಜನೌಷಧಿ ಕೇಂದ್ರಗಳ ಬಂದ್ ಆದೇಶ ರದ್ದುಗೊಳಿಸಿದ ಹೈಕೋರ್ಟ್
WhatsApp Group Join Now
Telegram Group Join Now

ಧಾರವಾಡ : ಕಳೆದ ಕೆಲವು ತಿಂಗಳುಗಳ ಹಿಂದೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ.

ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ ಪ್ರಕಟಿಸಿದೆ.ಈ ಪ್ರಕರಣ ನ್ಯಾಯಾಲಯಕ್ಕೆ ಬಾರಬಾರದಿತ್ತು.

ಜನೌಷಧಿ ಅಂಗಡಿ ಇಡಲು ಅವಕಾಶ ಕೊಡದೇ ಇದ್ದರೆ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಾಣುತ್ತದೆ ಎಂದು ಅಭಿಪ್ರಾಯಪಟ್ಟು ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

ಜನೌಷಧಿ ಅಂಗಡಿಯವರ ಲೀಸ್ ತಿಂಗಳು ಮುಗಿದ ಹಿನ್ನೆಲೆ ಅವರಿಗೆ ಸರ್ಕಾರಿ ಆಸ್ಪತ್ರೆ ಆವರಣದಿಂದ ಹೊರಗೆ ಔಷಧಿ ಅಂಗಡಿ ಇಡಲು ಸೂಚಿಸಲಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಜನೌಷಧಿ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಹಣ ಪಾವತಿಸಿ ಔಷಧಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

ಎರಡು ಕಡೆಯ ವಾದ ಆಲಿಸಿದ ನ್ಯಾಯಾಲಯ, 120 ಚದರ ಅಡಿ ಜಾಗದಲ್ಲಿ ಜನೌಷಧಿ ಇಟ್ಟು ಬಡವರಿಗೆ ಕಡಿಮೆ ಹಣದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ? ಜನೌಷಧಿ ಬಗ್ಗೆ ಯಾರಾದರೂ ದೂರು ಕೊಟ್ಟಿದ್ದಾರಾ? ಬಸ್ ಉಚಿತ ಮಾಡಿ ಎಂದು ತಮಗೆ ಯಾರು ಹೇಳಿದ್ದರು ಎಂದು ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗದುಕೊಂಡಿತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!