ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ನೇತೃತ್ವದ ಪೀಠವು ಇಂದು ಈ ಮಹತ್ವದ ಆದೇಶವನ್ನು ಹೊರಡಿಸಿದೆ.
ಇಡಿ ಅಧಿಕಾರಿಗಳು ಮುಡಾ ಹಗರಣದ ತನಿಖೆಯ ಭಾಗವಾಗಿ ಪಾರ್ವತಿ ಮತ್ತು ಭೈರತಿ ಸುರೇಶ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಿದ್ದರು. ಆದರೆ, ಈ ಸಮನ್ಸ್ ಅನ್ನು ಪ್ರಶ್ನಿಸಿ ಪಾರ್ವತಿ ಮತ್ತು ಭೈರತಿ ಸುರೇಶ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಹೈಕೋರ್ಟ್ ಇಡಿ ಸಮನ್ಸ್ ರದ್ದುಗೊಳಿಸಿರುವುದರಿಂದ ಪಾರ್ವತಿ ಮತ್ತು ಭೈರತಿ ಸುರೇಶ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ.




