Ad imageAd image

‘ಚಲವಾದಿ ನಾರಾಯಣ ಸ್ವಾಮಿಯವರನ್ನು ದಿಗ್ಬಂಧನದಲ್ಲಿರಿಸಿದ್ದ ಘಟನೆ ಖಂಡನೀಯ’

Bharath Vaibhav
‘ಚಲವಾದಿ ನಾರಾಯಣ ಸ್ವಾಮಿಯವರನ್ನು ದಿಗ್ಬಂಧನದಲ್ಲಿರಿಸಿದ್ದ ಘಟನೆ  ಖಂಡನೀಯ’
Jagdish shettar
WhatsApp Group Join Now
Telegram Group Join Now

ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ  ಚಲವಾದಿ ನಾರಾಯಣ ಸ್ವಾಮಿಯವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ ಶೆಟ್ಟರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಎತ್ತಿ ತೋರಿಸುತ್ತದೆ ವ್ಯಕ್ತಪಡಿಸಿದರು. ಚಲವಾದಿ ನಾರಾಯಣ ಸ್ವಾಮಿಯವರು ಕಲಬುರ್ಗಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ್ದರು. ಹೀಗಾಗಿ ಅವರ ಕಾರಿನ ಮೇಲೆ ಮೊಟ್ಟೆ ಒಡೆದು, ಶಾಹಿ ಹಾಕಿ, ಬೆದರಿಕೆ ಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಾಂವಿಧಾನಿಕ ಹುದ್ದೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗೌರವವಿದ್ದರೆ ಈ ಕೂಡಲೇ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಚಲವಾದಿ ನಾರಾಯಣಸ್ವಾಮಿ ಅವರಿಗೆ ಸೂಕ್ತ ಭದ್ರತೆ ಒದಗಿಸಿ ದಿಗ್ಬಂಧನ ವಿಧಿಸಿದ ಗೂಂಡಾಗಳ ಮೇಲೆ ಕಠಿಣ ಕ್ರಮ ಜರುಗಿಸಲಿ.
ಭಯೋತ್ಪಾದಕರನ್ನು, ಗೂಂಡಾಗಳನ್ನು ಬೆಂಬಲಿಸುವ ಇವರ ನಡೆಯು ಅತ್ಯಂತ ಖಂಡನೀಯ ಈ ಮನಸ್ಥಿತಿಯನ್ನು ಇನ್ನಾದರೂ ಕಾಂಗ್ರೆಸ್ಸಿಗರು ಬದಲಾಯಿಸಿಕೊಳ್ಳಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!