ಬೆಂಗಳೂರು : ಪರಿಶಿಷ್ಟ ಜಾತಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನ್ಯಾ| ನಾಗಮೋಹನ್ ದಾಸ್ ಆಯೋಗ ಇಂದಿನಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ.
ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ಈ ವೇಳೆ ಎಸ್ಸಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆ ಆಯಪ್ ನಲ್ಲಿ ನಮೂದಿಸಿ ಕುಟುಂಬ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ.
ಮತ್ತಷ್ಟು ಮಾಹಿತಿ: ಸಮೀಕ್ಷೆದಾರರ ಪ್ರಾಮುಖ್ಯತೆ: ಸಮೀಕ್ಷೆದಾರನಾಗಿ ಆಯ್ಕೆಗೊಂಡಿರುವುದು ಶಿಕ್ಷಕರು ಸಮೀಕ್ಷೆದಾರರಾಗಿ ಮಹತ್ವದ ಕರ್ತವ್ಯ ನಿರ್ವಹಿಸಬೇಕಿದೆ.
ಸಮೀಕ್ಷೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿವೆ. ಸಮೀಕ್ಷೆದಾರರು ನಿಷ್ಠೆಯಿಂದ ಸಕ್ರಿಯವಾಗಿ ಭಾಗವಹಿಸಿ ಸಮೀಕ್ಷೆ ಪೂರ್ಣಗೊಳಿಸಬೇಕಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಮೊದಲು ತಮಗೆ ವಹಿಸಿದ ಪ್ರದೇಶದಲ್ಲಿನ ಹಿರಿಯ ಮತ್ತು ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡಿ ಭೇಟಿಯ ಉದ್ದೇಶವನ್ನು ನಿವಾಸಿಗಳಿಗೆ ವಿವರಿಸುವ ಮೂಲಕ ಅವರೊಂದಿಗೆ ನಿಕಟ ಸೌಹಾರ್ದತೆ ಹೊಂದಬೇಕು.