Ad imageAd image

ವಿವಾದಿತ ‘ಕೇರಳ ಸ್ಟೋರಿ – 2 ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್‌ ತಡೆ

Bharath Vaibhav
ವಿವಾದಿತ ‘ಕೇರಳ ಸ್ಟೋರಿ – 2 ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್‌ ತಡೆ
WhatsApp Group Join Now
Telegram Group Join Now

ತಿರುವನಂತಪುರ: ವಿವಾದಿತ ‘ಕೇರಳ ಸ್ಟೋರಿ 2-ಗೋಸ್ ಬಿಯಾಂಡ್‌’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್‌ ಗುರುವಾರ ತಡೆ ನೀಡಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಚಿತ್ರದ ಬಿಡುಗಡೆಗೆ ನೀಡಿದ ಪ್ರಮಾಣೀಕರಣ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ಮಧ್ಯಂತರ ಆದೇಶವನ್ನು ಹೊರಡಿಸಿದರು.

ಈ ಸಿನಿಮಾದಲ್ಲಿ ಕೇರಳವನ್ನು ತಪ್ಪಾಗಿ ಚಿತ್ರಿಸಲಾಗಿದ್ದು, ಚಿತ್ರ ಬಿಡುಗಡೆಯಾದರೆ ಕೋಮು ಸೌಹಾರ್ದತೆಯನ್ನು ಕೆರಳಿಸಬಹುದು ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಮಾಣಪತ್ರ ನೀಡುವಾಗ ಸಿಬಿಎಫ್‌ಸಿ ವಿವೇಚನೆ ಬಳಸಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ, ಅರ್ಜಿದಾರರು ಮಂಡಳಿಯ ಮುಂದೆ ಸಲ್ಲಿಸಿರುವ ಪರಿಷ್ಕರಣಾ ಅರ್ಜಿಗಳನ್ನು ಎರಡು ವಾರಗಳ ಅವಧಿಯಲ್ಲಿ ಪರಗಣಿಸುವಂತೆ ಸಿಬಿಎಫ್‌ಸಿಗೆ ನಿರ್ದೇಶನ ನೀಡಿದೆ.

ಸಿಬಿಎಫ್‌ಸಿ ಹೊಸ ಆದೇಶಗಳನ್ನು ಹೊರಡಿಸುವವರೆಗೆ, ಚಲನಚಿತ್ರವನ್ನು ಬಿಡುಗಡೆ ಮಾಡದಂತೆ ನ್ಯಾಯಾಲಯ ಆದೇಶಿಸಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!