Ad imageAd image

ಲೋಕಸಭಾ ಚುನಾವಣೆ ರಂಗೇರುತ್ತಿದೆ ಇಂಥ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳ ಸಹತರ್ಕದಿಂದ ಭರ್ಜರಿ ಭೇಟಿಯಾಡುತ್ತಿದ್ದಾರೆ

Bharath Vaibhav
ಲೋಕಸಭಾ ಚುನಾವಣೆ ರಂಗೇರುತ್ತಿದೆ ಇಂಥ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳ ಸಹತರ್ಕದಿಂದ ಭರ್ಜರಿ ಭೇಟಿಯಾಡುತ್ತಿದ್ದಾರೆ
WhatsApp Group Join Now
Telegram Group Join Now

ಬೆಂಗಳೂರು :-  ರಾಜಧಾನಿಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲಕ್ಷಾಂತರ ರೂ. ಹಣ ಮತ್ತು ನೂರಾರು ಕುಕ್ಕರ ವಶಕ್ಕೆ ಪಡೆಯಲಾಗಿದೆ ಬೆಂಗಳೂರು ಹೊರವಲಯದ ಆನೇಕಲ ತಾಲೂಕಿನ ಜಿಗಣಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಕೊಪ್ಪ ಚೆಕಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.20 ಲಕ್ಷ ರೂ-ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ನಿನ್ನೆ ತಪಾಸಣೆ ಮಾಡುತ್ತಿದ್ದ ವೇಳೆ ಮಧು ಎಂಬವರು ಬ್ಯಾಂಕ ನಿಂದ ಡ್ರಾ ಮಾಡಿ ಹಣ ತೆಗೆದುಕೊಂಡು ಹೋಗುತ್ತಿದ್ದರು ಅತ್ತಿಬೆಲೆಯ ಜೆ.ಕೆ ಇಂಡಸ್ಟ್ರೀಸಗೆ ತೆಗೆದುಕೊಂಡು ಹೋಗುತ್ತಿದ್ದ ಹಣ ಎಂದು ತಿಳಿದುಬಂದಿದೆ.

ಚುನಾವಣೆ ಚೆಕಪೋಸ್ಟನಲ್ಲಿ ತಪಾಸಣೆ ಮಾಡುತ್ತಿದ್ದ ವೇಳೆ ಬೈಕನಲ್ಲಿ ಹಣ ಇತ್ತು ಹಣಕ್ಕೆ ಸೂಕ್ತ ದಾಖಲೆ ನೀಡಿದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ ಜಿಗಣಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳಿoದ ಹಣವನ್ನು ಜಪ್ಪು ಮಾಡಲಾಗಿದೆ.

ಮತ್ತೊಂದೆಡೆ, ಚುನಾವಣೆ ಅಧಿಕಾರಿಗಳು ಕಾರ್ಯಚರಣೆ ನಡೆಸುವಾಗ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕುಕ್ಕರಗಳನ್ನು ವಶಕ್ಕೆ ಪಡೆಯಲಾಗಿದೆ.

ಸ್ಪಷ್ಟ ಮಾಹಿತಿ ಮೇರೆಗೆ ದಾಳಿ ಮಾಡಿ ನೆಲಮಂಗಲದ ಜಾಸಟೋಲ ಚೆಕಪೋಸ್ಟ್‌ನಲ್ಲಿ 302 ಕುಕ್ಕರ್ಗಳನ್ನು ವಶಕ್ಕೆ ಪಡೆಯಲಾಗಿದೆ.

ವಸ್ತುಗಳನ್ನು ಬೆಂಗಳೂರಿನಿಂದ ಹುಬ್ಬಳ್ಳಿಗೆ ಕ್ಯಾಂಟ‌ರ ವಾಹನ ಮೂಲಕ ಸಾಗಿಸಲಾಗುತ್ತಿತ್ತು. ಚಾಲಕ ಈರಣ್ಣ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿ, ಸುಮಾರು 4 ಲಕ್ಷ ರೂ, ಮೌಲ್ಯದ ಕುಕ್ಕರ ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ನೆಲಮಂಗಲ ಪೊಲೀಸ ಠಾಣೆಯಲ್ಲಿ. ದಾಖಲು ಮಾಡಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.

ವರದಿ ರಾಜು ಮುಂಡೆ 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!