ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರದ ನಂಜನಗೂಡು ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ ಧ್ರುವನಾರಾಯಣ್ ಅವರು ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 65 ರಲ್ಲಿ ಸಹೋದರ ಧೀರನ್ ಧ್ರುವನಾರಾಯಣ್ ಅವರ ಜೊತೆಗೂಡಿ ಮತದಾನ ಮಾಡಿದರು,
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಕೆರಹಳ್ಳಿ ನವೀನ್, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯರಾದ ರೇವಣ್ಣ, ವಕೀಲರಾದ ಪುರುಷೋತ್ತಮ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:ಸ್ವಾಮಿ ಬಳೇಪೇಟೆ