ಚನ್ನಮ್ಮನ ಕಿತ್ತೂರು : ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಕಿತ್ತೂರು ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚನ್ನಮ್ಮನ ಕಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿ ಪಡಿಸಲು ಪಾಲಕ ಪೋಷಕರ ಚಿತ್ತ ಉತ್ತಮ ಫಲಿತಾಂಶ ದತ್ತ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ವೈ ತುಬಾಕಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ.
ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು,ನಿವೃತ್ತ ನಿರ್ದೇಶಕರಾದ ಸಿದರಾಮ ಮನಹಳ್ಳಿ, ಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು,
ತಾಯಿಂದರ,ಪಾಲಕ, ಪೋಷಕರ ಮಹಾಸಭೆ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳ್ಳಗೆ 10.30 ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮತ್ತು ಪರೀಕ್ಷಾ ಅಧ್ಯಯನ ಕೈ ಪಿಡಿ ಮತ್ತು ವಿಡಿಯೋ ಕ್ಲಿಪ್ಸ್ ಬಿಡುಗಡೆ ಮಾಡಲಾಗುವುದು.
ಶಾಸಕರಾದ ಬಾಬಾಸಾಹೇಬ ಪಾಟೀಲ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಮತಿ ರೋಹಿಣಿ ಬಾಬಾಸಾಹೇಬ ಪಾಟೀಲ,ಶಗಣ್ಯರು ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪಾಲಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು.
ವರದಿ: ಬಸವರಾಜ ಭಿಮರಾಣಿ.ಜಗದೀಶ ಕಡೋಲಿ