ಬಾಗಲಕೋಟೆ: ಬಾಗಲಕೋಟೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮಹಿಳೆಯ ಎಡಗಣ್ಣು ಮತ್ತು ಮುಖದ ಮೇಲೆ ಸುಟ್ಟ ಗಾಯಗಳಾಗಿವೆ.
ಮನೆ ಬಾಗಿಲು ತೆರೆಯದಿದ್ದಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಆಸಿಡ್ ನ್ನು ಪ್ರಿಯಕರ ಮೌನೇಶ್ ಬಡಿಗೇರ ಎಂಬಾತ ಆಸಿಡ್ ಎರಚಿದ್ದಾನೆ. ಗಾಯಗೊಂಡ ಲಕ್ಷ್ಮಿ ಬಡಿಗೇರ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆ ಗೆ ದಾಖಲಿಸಲಾಗಿದೆ.
ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ನಲ್ಲಿ ಘಟನೆ ನಡೆದಿದ್ದು, ಮಹಿಳೆಯ 8 ವರ್ಷದ ಮಗಳ ಮುಖಕ್ಕೂ ಆಸಿಡ್ ಎರಚಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.