ಶ್ರೀನಗರ : ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಭದ್ರತಾ ಪಡೆಗಳು, ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಎಂದು ನಂಬಲಾದ ಹಾಶಿಮ್ ಮೂಸಾ ಅಕಾ ಸುಲೇಮಾನ್ ಮತ್ತು ಅವನ ಇಬ್ಬರು ಸಹಚರರನ್ನ ಶ್ರೀನಗರದ ಹೊರವಲಯದಲ್ಲಿ ನಡೆದ ಎನ್ಕೌಂಟರ್’ನಲ್ಲಿ ಹೊಡೆದುರುಳಿಸಿದ್ದಾರೆ.
ತೀವ್ರ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನ ತಟಸ್ಥಗೊಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಶ್ರೀನಗರ ಮೂಲದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ Xನಲ್ಲಿ ಪೋಸ್ಟ್’ನಲ್ಲಿ ದೃಢಪಡಿಸಿದೆ.
ಹತ್ಯೆಯಾದ ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಮತ್ತು ನಿಷೇಧಿತ ಲಷ್ಕರ್-ಎ-ತೋಯ್ಬಾಗೆ ಸೇರಿದವರು ಎಂದು ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕ ಜಿ.ವಿ. ಸುಂದೀಪ್ ಚಕ್ರವರ್ತಿ ದೃಢಪಡಿಸಿದ್ದಾರೆ.
ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಸೇರಿ ‘ಆಪರೇಷನ್ ಮಹಾದೇವ್’ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು.