ಮಂಡ್ಯ : ಹಸೆಮಣೆ ಏರಬೇಕಿದ್ದ ನವವಧು ರಸ್ತೆ ಅಪಘಾತದಲ್ಲಿ ಮೃತಪಟ್ಟು ಮಸಣ ಸೇರಿದ ದಾರುಣ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹೆಚ್ ಬಸಾಪುರ ಗೇಟ್ ಬಳಿ ನಡೆದಿದೆ
ಬಾಳೆಹೊನ್ನಿಗ ಗ್ರಾಮದ ನಿವಾಸಿ ಕೃಷ್ಣೇಗೌಡ ಎಂಬುವರ ಮಗಳಾದ 26 ವರ್ಷದ ಶರಣ್ಯ ಮೃತ ದುರ್ದೈವಿಇನ್ನೇನು 20 ದಿನಗಳಲ್ಲಿ ಮದುವೆಯಾಗಬೇಕಿದ್ದ ಶರಣ್ಯ ಕನಕಪುರ ತಾಲ್ಲೂಕು ಕಾಡನಹಳ್ಳಿ ಗ್ರಾ ಪಂಚಾಯಿತಿಯಲ್ಲಿ ನರೇಗಾ ಯೋಜನೆಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಶನಿವಾರ ಬೆಳಿಗ್ಗೆ 10.30 ರ ಸಮಯದಲ್ಲಿ ಕಾರ್ಯನಿಮಿತ್ತ ಬಾಳೆಹೊನ್ನಿಗ ಗ್ರಾಮದಿಂದ ಹಲಗೂರು ಕಡೆಗೆ ತಮ್ಮ ಹೊಂಡಾ ಡಿಯೋದಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಶರಣ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ




