ಕಲಬುರಗಿ: ಜಾತಿ ಗಣತಿಯ ಬಗ್ಗೆ ಚರ್ಚಿಸಲು ನಾಳೆ ಸಭೆ ಕರೆಯಲಾಗಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಸಚಿವರೊಂದಿಗೆ ಚರ್ಚೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಬಗ್ಗೆ ನಾಳೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ.ಅಸಲಿಗೆ ಅದು ಜಾತಿ ಗಣತಿಯೇ ಅಲ್ಲ. ಅದು ಸಾಮಾಜಿಕ, ಆರ್ಥಿಕ ಸಮೀಕ್ಷೆಯಷ್ಟೇ ಎಂದು ತಿಳಿಸಿದರು.
ನಾಳೆ ನಡೆಯಲಿರುವ ಸಭೆಯಲ್ಲಿ ಸಚಿವರ ಅಭಿಪ್ರಾಯ ಸಂಗ್ರಹಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.