ನೇಪಿಡಾವ್: ನಿನ್ನೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದೆ ಮಾರಣಾಂತಿಕ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ರ ಗಡಿದಾಟಿದೆ. ನೂರಾರು ಮಂದಿ ಅವಶೇಷಗಳಡಿ ನಾಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
ಮ್ಯಾನ್ಮಾರ್‌ನಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಹಾಗೂ 6.4 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವನ್ನು ಮೋನಿವಾ ನಗರದಿಂದ ಸುಮಾರು 50 ಕಿ.ಮೀ.ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್‌ನಲ್ಲಿ ಎಂದು ಗುರುತಿಸಲಾಗಿದೆ.
ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಭಲ ಭೂಕಂಪದಿಂದಾಗಿ ಬೆರೆಯ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲೂ ಭಾರೀ ಹಾನಿ ಉಂಟಾಗಿದೆ. ಬ್ಯಾಂಕಾಕ್‌ನ ನಿರ್ಮಾಣಹಂತದಲ್ಲಿದ್ದ ಗಗನಚುಂಬಿ ಕಟ್ಟಡ ನೆಲಸಮವಾಗಿದ್ದು, ಅದರಲ್ಲಿದ್ದ ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಭಲ ಭೂಕಂಪ ಜೀವಗಳನ್ನು ಬಲಿ ತೆಗೆದುಕೊಂಡಿರುವುದರ ಜೊತೆಗೆ ಹಲವಾತು ಕಟ್ಟಡಗಳು, ಸೇತುವೆಗಳನ್ನೂ ನಾಶಪಡಿಸಿದೆ.
ಇನ್ನು ಮ್ಯಾನ್ಮಾರ್‌ನಲ್ಲಿ ವಿನಾಶ ಉಂಟಾದ ಪ್ರದೇಶದಲ್ಲಿ ರಕ್ತಕ್ಕೆ ಹೆಚ್ಚಿನ ಬೇಡಿಕೆಯಿದೆ ಎಂದು ಮ್ಯಾನ್ಮಾರ್ ಸರ್ಕಾರ ತಿಳಿಸಿದೆ. ಭೂಕಂಪದ ಹಿನ್ನೆಲೆ ಜುಂಟಾ ಸರ್ಕಾರ ಅಂತಾರಾಷ್ಟ್ರೀಯ ಸಹಾಯ ಕೋರಿದೆ. ಪತಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆ 5 ಮಿಲಿಯನ್ ಡಾಲರ್ ನಿಗದಿಪಡಿಸಿದೆ.