ಗುಜರಾತ್: ಏರ್ ಇಂಡಿಯಾ ವಿಮಾನ AI171 ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಸ್ಕುಮಾರ್ ಬುಚರ್ವಾಡಾ ಇಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ.
11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ಘಟನೆಯ ಸಮಯದಲ್ಲಿ ವಿಮಾನದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ.
ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿಎಸ್ ಮಲಿಕ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.