ನವದೆಹಲಿ : ಲೋಕಸಭೆಯ ಅಂಗೀಕಾರ ಪಡೆದಿರುವ ವಕ್ಫ್ (ತಿದ್ದುಪಡಿ) ಮಸೂದೆಗೆ ರಾಜ್ಯಸಭೆಯಲ್ಲಿ ಕೂಡ ಪಾಸ್ ಆಗಿದ್ದು, ಇದೀಗ ಈ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಇದೊಂದು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಎರಡೂ ಸದನಗಳಿಂದ ವಕ್ಫ್ (ತಿದ್ದುಪಡಿ) ಮಸೂದೆ ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆಯ ಅಂಗೀಕಾರವು ಸಾಮಾಜಿಕ-ಆರ್ಥಿಕ ನ್ಯಾಯ, ಪಾರದರ್ಶಕತೆ ಮತ್ತು ಸಮಗ್ರ ಬೆಳವಣಿಗೆಗಾಗಿ ನಮ್ಮ ಸಾಮೂಹಿಕ ಅನ್ವೇಷಣೆಯಲ್ಲಿ ಒಂದು ಐತಿಹಾಸಿಕ ಕ್ಷಣ ಎಂದು ಹೇಳಿದರು.
ಸಂಸತ್ತು ಮತ್ತು ಸಮಿತಿಯ ಚರ್ಚೆಗಳಲ್ಲಿ ಭಾಗವಹಿಸಿದ ಮತ್ತು ಈ ಶಾಸನಗಳನ್ನು ಬಲಪಡಿಸಲು ಕೊಡುಗೆ ನೀಡಿದ ಎಲ್ಲಾ ಸಂಸತ್ ಸದಸ್ಯರಿಗೆ ಕೃತಜ್ಞತೆಗಳು. ಸಂಸತ್ತಿನ ಸಮಿತಿಗೆ ತಮ್ಮ ಅಮೂಲ್ಯವಾದ ಸಲಹೆಗಳನ್ನು ಕಳುಹಿಸಿದ ಅಸಂಖ್ಯಾತ ಜನರಿಗೆ ವಿಶೇಷ ಧನ್ಯವಾದವನ್ನು ಪ್ರಧಾನಿ ಮೋದಿ ತಿಳಿಸಿದರು.
ಹೊಸದಾಗಿ ತಿದ್ದುಪಡಿ ಮಾಡಲಾದ ವಕ್ಫ್ ಮಸೂದೆಯು ಜನರ ಹಕ್ಕುಗಳನ್ನು ರಕ್ಷಿಸುತ್ತದೆ ಎಂದು ಸೂಚಿಸಿದ ಪ್ರಧಾನಿ, ವಕ್ಫ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಕೊರತೆ ಮುಸ್ಲಿಂ ಮಹಿಳೆಯರು ಮತ್ತು ಪದ್ಮಾಂಡಾ ಮುಸ್ಲಿಮರ ಹಿತಾಸಕ್ತಿಗಳಿಗೆ ಹಾನಿ ಮಾಡಿದೆ ಎಂದು ಹೇಳಿದರು.
ಅಲ್ಲದೇ ಇದೀಗ ಸಂಸತ್ತು ಅಂಗೀಕರಿಸಿದ ಶಾಸನಗಳು ಪಾರದರ್ಶಕತೆಯಯನ್ನು ಹೆಚ್ಚಿಸುತ್ತದೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸುತ್ತದೆ. ಈ ಹೊಸ ಕಾನೂನಿನಿಂದ ಯಾವುದೇ ರೀತಿಯಲ್ಲಿ ತೊಂದರೆ ಆಗುವುದಿಲ್ಲ ಎಂದು ಪ್ರಧಾನಿ ಮೋದಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.