ನವದೆಹಲಿ : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಹೀಗಾಗಿ ಈ ಬಗ್ಗೆ ಚರ್ಚೆ ಬೇಡ ಎಂದು ಅವರು ಹೇಳಿದರು.
ಕೇಂದ್ರ ಸಚಿವರ ಭೇಟಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ಎತ್ತಿನಹೊಳೆ ಯೋಜನೆ ವಿಚಾರವಾಗಿ ಕೇಂದ್ರ ಅರಣ್ಯ ಸಚಿವರ ಭೇಟಿಯಾಗುವ ಡಿಕೆಶಿ ಹಾಗೆಯೇ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನೂ ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.




