Ad imageAd image

ಸೆ. 28ಕ್ಕೆ ನಿಗದಿಯಾಗಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷೆ ಮತ್ತೆ ಮುಂದೂಡಿಕೆ

Bharath Vaibhav
ಸೆ. 28ಕ್ಕೆ ನಿಗದಿಯಾಗಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷೆ ಮತ್ತೆ ಮುಂದೂಡಿಕೆ
WhatsApp Group Join Now
Telegram Group Join Now

ಬೆಂಗಳೂರು  : 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಸೆ.22 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ 28 ಕ್ಕೆ ಮುಂದೂಡಲಾಗಿತ್ತು.

ಅಂದು ಕೂಡ ಯುಪಿಎಸ್ ಸಿ ಪರೀಕ್ಷೆ ಇರುವ ಕಾರಣ ಆ ದಿನಾಂಕವನ್ನೂ ಮುಂದೂಡಿಕೆ ಮಾಡಲಾಗಿದೆ. ಇದೀಗ ಪರೀಕ್ಷೆ ದಿನಾಂಕವನ್ನು ಅಕ್ಟೋಬರ್ 3 ಕ್ಕೆ ನಿಗದಿ ಮಾಡಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ಯುಪಿಎಸ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪಿಎಸ್ ಐ ಪರೀಕ್ಷೆಯನ್ನು ಸೆ.22 ರಂದು ನಿಗದಿ ಮಾಡಲಾಗಿತ್ತು.

ಆದ್ದರಿಂದ ಅಭ್ಯರ್ಥಿಗಳು ಒಟ್ಟಿಗೆ ಎರಡು ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುವದಿಲ್ಲ ಎಂಬ ಕಾರಣಕ್ಕೆ ಸೆ. 28 ರಂದು ಪರೀಕ್ಷೆ ನಡೆಸಲು ಯೋಜಿಸಲಾಗಿತ್ತು. ಸೆ.28 ರಂದು ಯುಪಿಎಸ್ ಸಿ ಪರೀಕ್ಷೆ ಇದೆ. ಹೀಗಾಗಿ ಸೆ.28 ರ ಪಿಎಸ್ ಐ ಪರೀಕ್ಷೆಯನ್ನೂ ಮುಂದೂಡಲಾಗಿದ್ದು, ಅ.3 ರಂದು ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!