ಬೆಳಗಾವಿ : ಬೆಳ್ಳಂಬೆಳಗ್ಗೆ ಮನೆಕಳ್ಳತನಕ್ಕೆ ಬಂದಿದ್ದ ಖದೀಮರನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಡೆದಿದೆ..
ಕಳೆದ ಹದಿನೈದು ದಿನಗಳಿಂದ ಗ್ರಾಮದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿತ್ತು. ಈ ಬಗ್ಗೆ ಹಲವಾರು ಬಾರಿ ಸ್ಥಳೀಯ ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದರು.ಆದರೆ ಪೊಲೀಸರು ಈ ಬಗ್ಗೆ ನಿರ್ಲಕ್ಷ್ಯ ತೋರಿದ್ದರು
ಆದರೆ ಇಂದು ಬೆಳ್ಳಂಬೆಳಗ್ಗೆ ಕಳ್ಳರು ಮನೆಯೊಂದನ್ನು ಲೂಟಿ ಮಾಡಲು ಬಂದಾಗ ಸಾರ್ವಜನಿಕರು ಹಿಡಿದು, ಅವರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಮುಗ್ಗ ಥಳಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ.