Ad imageAd image

ಇಂದು ಪ್ರಕಟವಾಗಬೇಕಿದ್ದ ಪಿಯುಸಿ ಫಲಿತಾಂಶ ಮುಂದೂಡಿಕೆ

Bharath Vaibhav
ಇಂದು ಪ್ರಕಟವಾಗಬೇಕಿದ್ದ ಪಿಯುಸಿ ಫಲಿತಾಂಶ ಮುಂದೂಡಿಕೆ
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಏಪ್ರಿಲ್ 7ರಂದು ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಮುಂದೂಡಿದೆ. ಫಲಿತಾಂಶದ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ ತಿಳಿಸಿದೆ.

ಮೊದಲ ಬಾರಿಗೆ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಕ್ಕೂ ಮೊದಲೇ ಫಲಿತಾಂಶ ಪ್ರಕಟಣೆಗೆ ಸಂಭಾವ್ಯ ದಿನಾಂಕಗಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದರು.

ಆದರೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಫಲಿತಾಂಶ ಪ್ರಕಟಣೆ ಸಾಧ್ಯವಾಗುತ್ತಿಲ್ಲ.

ನೀತಿ ಸಂಹಿತೆ ಹಿನ್ನೆಲೆ ಪ್ರಕಟಣೆಗೆ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗುವುದಿಲ್ಲ. ಆಯೋಗದಿಂದ ಪ್ರತಿಕ್ರಿಯೆ ಬಂದರೆ ಏಪ್ರಿಲ್ 8ರಂದು ಅಥವಾ ಇನ್ನು ವಿಳಂಬದ ಬಗ್ಗೆ ಮಂಗಳವಾರ ಸಂಜೆ ಅಧಿಕೃತ ಮಾಹಿತಿ ಬರಲಿದೆ.

ಆದರೆ, ಫಲಿತಾಂಶ ಪ್ರಕಟಣೆಗೆ ಚುನಾವಣಾ ಆಯೋಗದ ಅಭ್ಯಂತರವಿಲ್ಲ. ಉಪಚುನಾವಣೆ ಮುಗಿಯುವವರೆಗೆ ಸಚಿವರು ಲಭ್ಯವಾಗದ ಕಾರಣ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮುಂದೂಡಲಾಗಿದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!