Ad imageAd image

ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರ ಕಾರ್ಯ ಅನನ್ಯ

Bharath Vaibhav
ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕರ ಕಾರ್ಯ ಅನನ್ಯ
WhatsApp Group Join Now
Telegram Group Join Now

ಸಿರುಗುಪ್ಪ :– ನಗರದ ಎ.ವಿ.ಎಸ್. ಸಭಾಂಗಣದಲ್ಲಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ನಿಮಿತ್ತ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರುಗಿತು.

ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಹಾಗೂ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಜ್ಯೋತಿ ಬೆಳಗಿಸಿ ಶಾಸಕ ಬಿ.ಎಮ್.ನಾಗರಾಜ ಅವರು ಉದ್ಘಾಟಿಸಿದರು.

ನಂತರ ಮಾತನಾಡಿ ದೇಶದ ಭವಿಷ್ಯತ್ತಿನ ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಕಾರ್ಯನಿರತವಾಗಿರುವ ಗುರುವಿನ ಸ್ಥಾನವು ಸಮಾಜದಲ್ಲಿ ಅನನ್ಯವಾಗಿದೆ.ಮಕ್ಕಳ ಬಗ್ಗೆ ವಿಶೇಷ ಕಾಳಜಿ ತೋರಿದವರನ್ನು ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿ ಗುರುತಿಸಿ ಅವರನ್ನು ಸನ್ಮಾನಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ನಿಮ್ಮೆಲ್ಲರ ಪರಿಶ್ರಮದಿಂದ ತಾಲೂಕಿನಲ್ಲಿ ಉತ್ತಮ ಶಿಕ್ಷಣ ದೊರೆಯಲು ಸಾಧ್ಯವಾಗಿದ್ದು, ಶಾಲೆಗಳ ದುರಸ್ತಿ, ಮೂಲಭೂತ ಸಮಸ್ಯೆಗಳಿಗಾಗಿ ನಮ್ಮನ್ನು ನೇರವಾಗಿ ಸಂಪರ್ಕಿಸಿದಲ್ಲಿ ಸಮಸ್ಯೆಗಳ ಇತ್ಯರ್ಥಕ್ಕಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗುರಪ್ಪ ಮಾತನಾಡಿ ತಮಿಳುನಾಡಿನ ತಿರುತ್ತಣ ಗ್ರಾಮದಲ್ಲಿ ಜನಿಸಿರುವ ರಾಧಾಕೃಷ್ಣನ್ ಅವರು ಉತ್ತಮ ಶಿಕ್ಷಕರಾಗಿ, ರಾಷ್ಟ್ರಪತಿಯಾಗಿ ಸೇವೆಸಲ್ಲಿಸಿದ್ದಾರೆ.

ಅವರ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಕರು, ಮತ್ತು ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು.ಶಿವಕುಮಾರ ಬಳಿಗಾರ್ ಅವರು ದಿನಾಚರಣೆಯ ವಿಶೇಷ ಉಪನ್ಯಾಸ ನೀಡಿದರು. ಕುಮಾರಿ ಆಧ್ಯಾಶ್ರೀ ಭರತನಾಟ್ಯವನ್ನು ಪ್ರದರ್ಶಿಸಿದಳು.

ಇದೇ ವೇಳೆ ನಗರಸಭೆ ಅಧ್ಯಕ್ಷೆ ರೇಣುಕಮ್ಮ, ಕ್ಷೇತ್ರ ಸಮನ್ವಯಾಧಿಕಾರಿ ತಮ್ಮನಗೌಡ ಪಾಟೀಲ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಹೆಚ್.ಜೆ.ಶ್ರೀಧರ, ದೈಹಿಕ ಪರಿವೀಕ್ಷಕ, ರಮೇಶ, ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಈರಣ್ಣ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಲಿಂಗರಾಜುರೆಡ್ಡಿ, ತೆಕ್ಕಲಕೋಟೆ ಠಾಣಾ ಪಿ.ಎಸ್.ಐ ವಿ.ಶ್ರೀನಿವಾಸ, ಇನ್ನಿತರ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಇನ್ನಿತರ ಅಧಿಕಾರಿಗಳು, ಶಿಕ್ಷಕರು ಇದ್ದರು.

ವರದಿ : ಶ್ರೀನಿವಾಸ್ ನಾಯ್ಕ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!