ತುಮಕೂರು : ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕು ತಹಸಿಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವತಿಯಿಂದ ಕೈಗೊಂಡ ಮುಷ್ಕರದ ಯಾವುದೇ ಬೇಡಿಕೆಗಳನ್ನು ಈಡೇರಿಸದೇ ಇರುವುದರಿಂದ ಎರಡನೇ ಹಂತದ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿ ರಂಜಿತ್ ಕುಮಾರ್ ಮಾತನಾಡಿ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಈ ಹಿಂದೆ ಮುಷ್ಕರ ನಡೆಸಿದ ಕಾರಣ ದಿನಾಂಕ:03-10-2024 ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿರುತ್ತಾರೆ. ಅದರಂತೆ ಸದರಿ ದಿನದಿಂದಲೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಗಿರುತ್ತದೆ. ನಂತರ ಸರ್ಕಾರವು ಈ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ ಬದಲಾಗಿ ಮುಷ್ಕರ ರಾಜ್ಯಾದ್ಯಂತ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಸರಿಯಾಗಿ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಅದಕ್ಕೆ ನಾವು ಮುಷ್ಕರವನ್ನು ಇಂದಿನಿಂದ ಹಮ್ಮಿಕೊಳ್ಳಲಾಗಿದೆ.
ಅದರಂತೆ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಎರಡನೇ ದಿನ ಪಾವಗಡ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಕಛೇರಿ ಆವರಣದಲ್ಲಿ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ
ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ರಾಜೇಶ್ ರವರು ಮಾತನಾಡಿ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್, ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರಲಾಗುತ್ತಿದೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್, ಲ್ಯಾಪ್‌ಟಾಪ್, ಅದಕ್ಕೆ ಅವಶ್ಯವಿರುವ ಇಂಟರ್‌ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸುವಂತೆ ಒತ್ತಡ ಹೇರುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆಂದರು.
ಇದೇ ವೇಳೆಯಲ್ಲಿ ಗ್ರಾಮ ಆಡಳಿತ ಸಂಘದ ಸದಸ್ಯ ಕಿರಣ್ ನ ಮಾತನಾಡಿ ಹೆಚ್ಚಿನ ಸಮಸ್ಯೆ ಇದೆ ಇದರಲ್ಲಿ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್‌ಹುಕುಂ, ಹಕ್ಕುಪತ್ರ, ನಮೂನೆ 1–5 ವೆಬ್ ಅಪ್ಲಿಕೇಷನ್ ಮತ್ತು ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಪದೋನ್ನತಿ, ವರ್ಗಾವಣೆ, ನೌಕರರ ಅಮಾನತ್ತು ಸೇರಿ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಅವುಗಳನ್ನು ಈಡೇರಿಸಲು ಸರ್ಕಾರ ಸ್ಪಂದಸದೇ ಇರುವುದರಿಂದ ಇಂದಿನಿಂದ ಎಲ್ಲ ಬಗೆಯ ಮೊಬೈಲ್ ಆ್ಯಪ್ ಹಾಗೂ ನೆಟ್ ಅಪ್ಲಿಕೇಶನ್ ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಮುಷ್ಕರ ನಡೆಸಲಾಗುತ್ತಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ತಿಮ್ಮಾರೆಡ್ಡಿ, ರಘುವೀರ್, ರಾಘವೇಂದ್ರರೆಡ್ಡಿ, , ಇಮಾಮ್, ಶ್ರೀನಿವಾಸ್ ಮೂರ್ತಿ, ಷಣ್ಮುಖರಾದ್ಯ, ಸಂಜಯ್, ಆಸಿಫ್, ಈರಣ್ಣ. ವೀರೇಶ್. ಹೇಮಂತ್. ಅಂಜನ್ ಮೂರ್ತಿ. ಉಷಾ. ರಮೇಶ್. ಚಂದ್ರ. ಇನ್ನು ಸೇರಿದಂತೆ ಇತರರು ಉಪಸ್ಥಿತರಿದರು
ವರದಿ: ಶಿವಾನಂದ ಪಾವಗಡ




