ಹುಬ್ಬಳ್ಳಿ: ಹುಬ್ಬಳ್ಳಿ -ಪುಣೆ ನಡುವೆ ಎರಡನೇ ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾಡಿದ ಮನವಿಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ -ಪುಣೆ ನಡುವೆ ಎರಡನೇ ವಂದೇ ಭಾರತ್ ರೈಲು ಆರಂಭಿಸಲು ಒಪ್ಪಿಗೆ ನೀಡಿದ್ದಾರೆ.
ಈ ಮೂಲಕ ಕೇಂದ್ರದಿಂದ ಮತ್ತೊಂದು ಕೊಡುಗೆ ಸಿಕ್ಕಿದೆ. ಶೀಘ್ರವೇ ಹುಬ್ಬಳ್ಳಿ -ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಹ್ಲಾದ್ ಜೋಶಿ ಅವರಿಗೆ ಮಾಹಿತಿ ನೀಡಿದ್ದಾರೆ. ಶೀಘ್ರವೇ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.