ಧಾರವಾಡ : ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ. ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ,
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಕಟ್ಟಿ ನಿವಾಸಿ ರಮೇಶ್ ಮೇಗುಂಡಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ಸ್ವಂತ ಅತ್ತಿಗೆಯನ್ನ(ಅಣ್ಣನ ಹೆಂಡತಿ) ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ರಮೇಶ್, ಅತ್ತಿಗೆಯನ್ನು ಹಿಡಿದುಕೊಂಡು ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಬಳಿಕ ಮೈದುನನಿಂದ ತಪ್ಪಿಸಿಕೊಂಡು ಮನೆಯಿಂದ ಕೈಗಾಡಿಕೊಂಡು ಹೊರಗೆ ಬಂದಿದ್ದಾಳೆ. ಆಗ ಅಕ್ಕಪಕ್ಕದ ಜನರು ಏನಾಯ್ತು ಎಂದು ಓಡೋಡಿ ಬಂದಿದ್ದು, ಗಾಯಗೊಂಡಿದ್ದ ಸವಿತಾಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸವಿತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಕಾಮುಕ ಮೈದುನ ಪರಾರಿಯಾಗಿದ್ದಾನೆ.