ಬೆಳಗಾವಿ : ಕುಡಿತದ ಚಟಕ್ಕೆ ಒಳಗಾಗಿರುವ ಮಗ ತಂದೆಗೆ ಮದ್ಯ ಸೇವಿಸಲು ದುಡ್ಡು ಕೊಡು ಎಂದು ಕೇಳಿದಾಗ ತಂದೆ ಒಪ್ಪಲ್ಲ. ಇದಕ್ಕೆ ಕೋಪಗೊಂಡ ಮಗ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ತುಕಾರಾಮ ವನಖಂಡೆ (89) ಎನ್ನುವವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆಯನ್ನು (49) ಎಂಬಾತ ಕೊಲೆ ಮಾಡಿದ್ದಾನೆ. ಆರೋಪಿ ಬಾಳಾಸಾಬ್ ವನಖಂಡೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೆ ಒಳಗಾದಂತಹ ತುಕಾರಾಮ್ ಅವರನ್ನು ಕೂಡಲೇ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದರು. ಘಟನೆ ಕುರಿತಂತೆ ಅಥಣಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.