ಬೆಂಗಳೂರು : ಬೆಂಗಳೂರಿನಲ್ಲಿ ತಾಯಿಯ ಎದುರೇ ಮಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಾರಕಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಪವನ್ ಕುಮಾರ್ ಎಂಬಾತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿಯ ಥಣಿಸಂದ್ರ ದಲ್ಲಿ ಈ ಒಂದು ಘಟನೆ ನಡೆದಿದೆ.
ಮಧ್ಯರಾತ್ರಿ ದುಷ್ಕರ್ಮಿಗಳು ಲಾಂಗ್ ನಿಂದ ಕೊಚ್ಚಿ ರೌಡಿಶೀಟರ್ ಅನ್ನು ಕೊಲೆ ಮಾಡಿದ್ದಾರೆ ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಡಿಜೆ ಹಳ್ಳಿ ಠಾಣೆ ರೌಡಿಶೀಟರ್ ಆಗಿದ್ದ ಪವನ್ ಕುಮಾರ್ ಕೊಲೆ ಕೇಸ್ ಒಂದರಲ್ಲಿ ಆರೋಪಿಯಾಗಿದ್ದ. ಮೂರು ತಿಂಗಳ ಹಿಂದೆ ಪವನ್ ಕುಮಾರ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಪವನ್ ಕುಮಾರ್ ನನ್ನ ಕೊಲೆ ಮಾಡಲಾಗಿದೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ.




