Ad imageAd image

ಒಳ ಮೀಸಲಾತಿ ಜಾರಿ : ಆ. 16 ರಂದು ರಾಜ್ಯ ಸಚಿವ ಸಂಪುಟ ನಿಗದಿ 

Bharath Vaibhav
ಒಳ ಮೀಸಲಾತಿ ಜಾರಿ : ಆ. 16 ರಂದು ರಾಜ್ಯ ಸಚಿವ ಸಂಪುಟ ನಿಗದಿ 
vidhana soudha
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ಈಗಾಗಲೇ ಸರ್ಕಾರಕ್ಕೆ ಡಾ.ಹೆಚ್‌ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ವರದಿಯನ್ನು ಸಲ್ಲಿಸಿದೆ. ಈ ವರದಿಯನ್ನು ಜಾರಿಗೊಳಿಸೋ ಸಂಬಂಧ ಮುಹೂರ್ತ ಫಿಕ್ಸ್ ಆಗಿದೆ. ಅದೇ ಆಗಸ್ಟ್.16ರಂದು ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಈ ಕುರಿತಂತೆ ಸಚಿವ ಸಂಪುಟದ ಸರ್ಕಾರ ಅಪರ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16-08-2025ರ ಶನಿವಾರ ಸಂಜೆ 4 ಗಂಟೆಗೆ ಸಚಿವ ಸಂಪುಟದ ವಿಶೇಷ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ ಡಾ.ಹೆಚ್‌ಎನ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗವು ಸಲ್ಲಿಸಿರುವ ವರದಿಯ ಕುರಿತಂತೆ ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಸಲಾಗುವುದು ಎಂಬುದಾಗಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!