ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಪಡಿಸುವ ಪಡಿತರ ಚೀಟಿ ಪರಿಷ್ಕರಣೆ ಅಭಿಯಾನಕ್ಕೆ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.
ಈ ಕುರಿತು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ ನೀಡಿದ್ದು, ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು.
ಅರ್ಹರಿಗೆ ಬಿಪಿಎಲ್ ತಪ್ಪಿ ಹೋಗಬಾರದು. ಆಕಸ್ಮಾತ್ ತಪ್ಪಿ ಹೋಗಿದ್ದರೆ ವಾಪಸ್ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ವಾಪಸ್ ನೀಡಬೇಕು. ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆದಾರರನ್ನು ಹೊರತುಪಡಿಸಿ ಉಳಿದವರ ಕಾರ್ಡ್ ವಾಪಸ್ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.