ಬೆಂಗಳೂರು: ಬೆಲೆಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ರೈತರಿಗೆ ಸರ್ಕಾರ ನೆರವು ನೀಡಿದೆ. 250 ರೂಪಾಯಿ ಸಹಾಯಧನ ಸೇರಿ 2150 ರೂಪಾಯಿ ಮಾರುಕಟ್ಟೆ ಮಧ್ಯ ಪ್ರವೇಶ ದರದಂತೆ 40 ಲಕ್ಷ ಟನ್ ಮೆಕ್ಕೆಜೋಳ ಖರೀದಿಗೆ ಆದೇಶ ಹೊರಡಿಸಲಾಗಿದೆ.
2025- 26ನೇ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳಕ್ಕೆ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸದ ಮೊತ್ತ ಪಾವತಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಇತ್ತೀಚೆಗೆ ಮೆಕ್ಕೆಜೋಳ ಬೆಂಬಲ ಬೆಲೆ ಸಿಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಬಲ ಬೆಲೆ ನಿಗದಿ ಮಾಡುವ ಮೂಲಕ ಸರ್ಕಾರ ರೈತರ ನೆರವಿಗೆ ಧಾವಿಸಿದೆ.
1,900 ರೂ. ಮಾರುಕಟ್ಟೆ ಬೆಲೆಗೆ ತನ್ನ ಪಾಲಿನ 250 ರೂ. ಸಹಾಯಧನ ಸೇರಿಸಿ ನೀಡಲಾಗುವುದು. ಎಕರೆಗೆ 12 ಕ್ವಿಂಟಲ್ ಒಬ್ಬ ರೈತರಿಂದ ಗರಿಷ್ಠ 50 ಕ್ವಿಂಟಲ್ ಖರೀದಿಸಲಾಗುವುದು.




