Ad imageAd image

ಪೆಟ್ರೋಲ್‌, ಡೀಸೆಲ್‌ ಬೆಲೆ ₹3 ಹೆಚ್ಚಳ: ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನರಿಗೆ ಬಿಗ್ ಶಾಕ್ ನೀಡಿದೆ. ‌ಬಹು ದಿನಗಳ ಬಳಿಕ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ.

ಕಾಂಗ್ರೆಸ್‌ ಸರ್ಕಾರ ನೀಡಿದ ಪಂಚ ಗ್ಯಾರಂಟಿ ಯೋಜನೆಗಳ ಖರ್ಚು ಸರಿದೂಗಿಸಲು ಸಿದ್ದರಾಮಯ್ಯ ಸರ್ಕಾರವು ಪೆಟ್ರೋಲ ಹಾಗೂ ಡೀಸೆಲ್‌ ಮೇಲಿನ ಸೆಸ್‌ ಹೆಚ್ಚಳ ಮಾಡಿದೆ.

ಜೂನ್‌ 15 ರಿಂದ(ಶನಿವಾರ ) ರಂದು ಈ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಲಾಗಿದ್ದು, ಇಂಧನ ದರ ರಾಜ್ಯದಲ್ಲಿ ದುಬಾರಿಯಾಗಲಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗುವ ಸಾಧ್ಯತೆ ಇದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ

WhatsApp Group Join Now
Telegram Group Join Now
Share This Article
error: Content is protected !!