Ad imageAd image

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

Bharath Vaibhav
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ
vidhan soudha
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಎಲ್ಲಾ ಘಟಕಗಳಲ್ಲಿ ಅಂದರೆ ಬೆಂಗಳೂರು ನಗರ ಒಳಗೊಂಡಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹಲ್ಮಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ ಎಂದಿದ್ದಾರೆ.

ಆದ್ದರಿಂದ, ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು, ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸಿ, ಸದರಿ ಹಲ್ಮಟ್ ಅನ್ನು ಭದ್ರವಾಗಿ ಕಟ್ಟಿಕೊಳ್ಳುವುದು ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!