Ad imageAd image

ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ 

Bharath Vaibhav
ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ 
vidhan soudha
WhatsApp Group Join Now
Telegram Group Join Now

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲೋಕೇಶ್ ಭರಮಪ್ಪ ಜಗಲಸಾರ್ ಅವರನ್ನು ಬೆಂಗಳೂರು ನಗರ ದಕ್ಷಿಣ ವಲಯದ ಉಪಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ಮೈಸೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಎಸ್ಪಿಿಯಾಗಿರುವ ಗೀತಾ ಎನ್.ಎಸ್.ಅವರನ್ನು ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ಹುದ್ದೆಯ ಸಮವರ್ತಿತ ಜವಾಬ್ದಾರಿಯನ್ನು ವಹಿಸಲಾಗಿದೆ.

ಡಾ.ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ನಗರ ಪೂರ್ವ ವಲಯದ ಉಪಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಾಗೂ ಕರ್ನಾಟಕ ಲೋಕಾಯುಕ್ತ ಎಸ್ಪಿ ಹುದ್ದೆಯ ಸಮವರ್ತಿತ ಜವಾಬ್ದಾರಿಯನ್ನು ವಹಿಸಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!