ಬೆಂಗಳೂರು : ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಡ್ಯೂಪ್ಲಿಕೇಟ್ ಸಿಎಂ. ತೆಲಂಗಾಣದಲ್ಲಿ ಚುನಾವಣೆ ಪ್ರಚಾರ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ ಎಂದರು.
ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ಹೇಳಿದ್ದಾರೆ.ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದೆ ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ಎಂದು ವಾಗ್ದಾಳಿ ನಡೆಸಿದರು.
ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ. ಶಕ್ತಿ ಯೋಜನೆಯಿಂದ ಸಾಕಷ್ಟು ಅವಾಂತರವಾಗಿದೆ. ಸಿಬ್ಬಂದಿ ಕೊರತೆಯಿಂದ ಸರ್ಕಾರದಲ್ಲಿ ಹಲವು ಸಮಸ್ಯೆಗಳು ಉಂಟಾಗಿವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.