ಹುಬ್ಬಳ್ಳಿ : ಕೇಂದ್ರದ ಮಸೂದೆಯ ವಿರುದ್ಧ ಈಗ ಕಾರ್ಮಿಕ ಸಂಘಟನೆಗಳು ಸಿಡಿದೆದ್ದಿವೆ. ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಮುಷ್ಕರ ಜೋರಾಗಿಯೇ ನಡೆದಿದೆ. ದೇಶವ್ಯಾಪಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹುಬ್ಬಳ್ಳಿಯಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೂ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ಮನರೇಗಾ ಪುನಃ ಸ್ಥಾಪಿಸಲು ಒತ್ತಾಯಿಸಿ ಹೋರಾಟ ನಡೆಸಲು ಮುಂದಾಗಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಬೆಂಬಲ ನೀಡಲಿವೆ.
ಇನ್ನೂ ನರೇಗಾ ಯೋಜನೆಯನ್ನ ಪುನರ್ ಸ್ಥಾಪಿಸಿ, ವಿ.ಜಿ. ಜಿ ರಾಮ್‌ಜಿ ಕಾಯ್ದೆ ರದ್ದುಗೊಳಿಸಬೇಕು. ಕೆಂದ್ರ ಮತ್ತು ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ, ಎಪಿಎಂಸಿ ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನ ಹಿಂಪಡೆಯಬೇಕು ಎಂಬುವಂತ ಬೇಡಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ವಿದ್ಯುಚ್ಛಕ್ತಿ ಶಕ್ತಿ ಮಸೂದೆ, ಬೀಜ ಮಸೂದೆಗಳನ್ನ ಹಿಂಪಡೆಯಬೇಕು. ವಿಮಾ ತಿದ್ದುಪಡಿ ಕಾಯ್ದೆ ಹಾಗೂ ಶಾಂತಿ ಕಾಯ್ದೆಗಳನ್ನ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ವರದಿ : ಸುಧೀರ್ ಕುಲಕರ್ಣಿ




