ತುಮಕೂರು: ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಹಮ್ಮದ್ ಆಸಿಫ್(12), ಮಮ್ತಾಜ್(38), ಶಾಕಿರ್ ಹುಸೇನ್(48) ಮೃತಪಟ್ಟವರು ಎಂದು ಹೇಳಲಾಗಿದೆ.ಸ್ಥಳಕ್ಕೆ ತುಮಕೂರು ಪೊಲೀಸರು ದೌಡಾಯಿಸಿದ್ದಾರೆ.
ಮೃತರು ಮಧುಗಿರಿ ತಾಲೂಕಿನ ಗುಡ್ಡೇನಹಳ್ಳಿ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಟ್ಟ ಮಂಜಿನ ಕಾರಣ ದಾರಿ ಕಾಣದೇ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.