ಉತ್ತರ ಕನ್ನಡ: ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಜನರ, ಬಡವರ ಪರವಾಗಿ ಇಲ್ಲವಾಗಿದೆ. ಕೋರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು, ಚಿಕಿತ್ಸೆ ಸರಿಯಾಗಿ ಸಿಗದೆ ರಾಜ್ಯದಲ್ಲಿ 4 ಲಕ್ಷ ಜನ ಸತ್ತಿದ್ದಾರೆ. ಈಗ ವ್ಯಾಕ್ಸಿನ್ ತೆಗೆದುಕೊಂಡವರು ಸಾಯುವ ಕಾಲ ಬಂದಿದೆ.
ಬಿಜೆಪಿಯವರು ಈ ವ್ಯಾಕ್ಸಿನ್ ಕೊಟ್ಟ ಕಂಪನಿಯಿಂದಲೂ ಲಂಚ ಹೊಡೆದಿದ್ದಾರೆ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಉತ್ತರ ಕನ್ನಡದ ಮುಂಡಗೋಡದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದಂತ ಅವರು, ಕೊರೋನಾ ಲಸಿಕೆ ಹಾಕಿಸಿಕೊಂಡವರಿಗೆ ಮೋದಿ ಫೋಟೊ ಇರುವ ಪ್ರಮಾಣ ಪತ್ರ ಕೊಟ್ಟರು.
ಸತ್ತವರ ಸರ್ಟಿಫಿಕೆಟ್ಗೆ ಏಕೆ ಮೋದಿ ಫೋಟೋ ಹಾಕಿಲಿಲ್ಲ. ಜನಕ್ಕೆ ಏನೂ ಸಹಾಯ ಮಾಡದೆ ದೀಪ ಹಚ್ಚಿ, ಚಪ್ಪಾಳೆ ಹೊಡೆಯಿರಿ ಮಂಗಮಾಯ ಆಗುತ್ತೆ ಎಂದರು, ಏನೂ ಆಗಲಿಲ್ಲ. ಕೋರೋನಾ ಸಮಯದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಕೊಟ್ಟಿದ್ದೇನೆ ಎಂದು ಹೇಳಿತು. ಆ ಹಣ ಯಾರಿಗಾದರೂ ಬಂದಿದೆಯೇ? ಎಂದು ಪ್ರಶ್ನಿಸಿದರು.
ನಮ್ಮ ಕರಾವಳಿಯ ಕಾರ್ಪೋರೇಷನ್ ಬ್ಯಾಂಕ್, ವಿಜಯಾ ಬ್ಯಾಂಕ್ ಅನ್ನು ಬೇರೆ ಬ್ಯಾಂಕ್ ಗಳ ಜೊತೆ ವಿಲೀನ ಮಾಡಿ ಒಂದೂ ಬ್ಯಾಂಕ್ ಇಲ್ಲದಂತೆ ಮಾಡಿದ್ದು ಬಿಜೆಪಿ ಸಾಧನೆ. ಕೋರೋನಾ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಜದ ಎಲ್ಲಾ ವರ್ಗದ ಕಾರ್ಮಿಕರಿಗೆ 10 ಸಾವಿರ ಸಹಾಯಧನ ನೀಡಿ ಎಂದು ಮನವಿ ಮಾಡಿದರು ಕೊಡಲಿಲ್ಲ. ಆನಂತರ ಒಂದಷ್ಟು ಜನಕ್ಕೆ 5 ಸಾವಿರ ಕೊಟ್ಟು ಕೈತೊಳೆದುಕೊಂಡರು ಎಂದು ಗುಡುಗಿದರು.