ಬೆಂಗಳೂರು : ಸೆ.16ರವರೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ವಾಷಿಂಗ್ಟನ್ಗೆ ಭೇಟಿ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ತಾವು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿ ಭೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ.
ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ ಎಂದಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ಅವರು ವಿನಂತಿಸಿಕೊಂಡಿದ್ದಾರೆ.
ತಾವು ತಮ್ಮ ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಕುರಿತು ಡಿಕೆಶಿ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು ತಮ್ಮ ಪ್ರವಾಸದ ಬಗ್ಗೆಯೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.