ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.
ಮೂರು ವರ್ಷಕ್ಕೊಮ್ಮೆ ದೇವಿಯ ಜಾತ್ರೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತೆ ಈ ಜಾತ್ರಾ ಮಹೋತ್ಸವದಲ್ಲಿ ಕೋಹಳ್ಳಿಯ ಭಕ್ತರು ದೇವಿಯ ದರ್ಶನ ಪಡೆದರು.
ಜಾತ್ರಾ ಮಹೋತ್ಸವದ ನಿಮತ್ಯ ಚೋಡಕಿ ಹಾಡು ನಾಟಕ ಆಯೋಜಿಸಲಾಗಿತ್ತು. ಸರ್ವ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆಯು ಸಹ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಸಕಲ ಸದ್ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು.
ವರದಿ: ಅಜಯ್ ಕಾಂಬಳೆ