Ad imageAd image
- Advertisement -  - Advertisement -  - Advertisement - 

ನಿಪ್ಪಾಣಿ : ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವು

Bharath Vaibhav
ನಿಪ್ಪಾಣಿ : ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವು
WhatsApp Group Join Now
Telegram Group Join Now

ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರ ಮಳೆಗೆ ಪಕ್ಕದ ಮನೆಯ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ.

ಜಿಲ್ಲೆಯಾದ್ಯಂತ ರಾತ್ರಿಯಿಡಿ ಮಳೆ ಸುರಿದಿದ್ದು, ನಿಪ್ಪಾಣಿ ಬಳಿಯ ಜತ್ರಾಟ್ ವೇಸ್ ಎಂಬಲ್ಲಿ ತಡ ರಾತ್ರಿ ಮನೆಯ ಗೋಡೆ ಕುಸಿದು ಬಿದ್ದಿದೆ.
ಪರಿಣಾಮ ಮನೆಯ ಪಕ್ಕದಲ್ಲಿ ಶೆಡ್ ನಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ತಿರುಪತಿ (45) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ತಹಶೀಲ್ದಾರ್, ಉಪ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!