Ad imageAd image

ಹೆಣ್ಣು ಸಿಗದಿದ್ದಕ್ಕೆ ನದಿಗೆ ಹಾರಿ ವಾರ್ಡರ್ ಆತ್ಮಹತ್ಯೆ 

Bharath Vaibhav
ಹೆಣ್ಣು ಸಿಗದಿದ್ದಕ್ಕೆ ನದಿಗೆ ಹಾರಿ ವಾರ್ಡರ್ ಆತ್ಮಹತ್ಯೆ 
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲೆಯ ಹಿಂಡಲಗಾ ಕಾರಾಗೃಹದ ವಾರ್ಡರ್ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ಮುತ್ನಾಳ ಗ್ರಾಮದ ನಿವಾಸಿ ವಿನೋದ ಭೀಮಪ್ಪ ತಿಗಡಿ (31) ಮೃತ ವ್ಯಕ್ತಿ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಾರ್ಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು.ಇಂದು ಇದ್ದಕ್ಕಿದ್ದಂತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಇತ್ತೀಚೆಗಷ್ಟೇ ವಿನೋದ್ ಹೊಸ ಮನೆ ಕೂಡ ಕಟ್ಟಿಸಿದ್ದರು. ವಿನೋದ್ ಮದುವೆಗಾಗಿ ಮನೆಯಲ್ಲಿ ಹುಡುಗಿ ಹುಡುಕುತ್ತಿದ್ದರು.

ಆದರೆ ಎಷ್ಟೇ ಪ್ರಯತ್ನ ಮಾಡಿದರೂ ಹುಡುಗಿ ಸಿಗುತ್ತಿರಲಿಲ್ಲ. ಇದರಿಂದ ತೀವ್ರವಾಗಿ ಮನನೊಂದಿದ್ದರು ಎನ್ನಲಾಗಿದೆ. ಜೀವನದಲ್ಲಿ ಜಿಗುಪ್ಪೆಗೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ಚನ್ನಮ್ಮ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!