ನವದೆಹಲಿ: ಮಹಿಳಾ ಮೀಸಲಾತಿ ಬಿಲ್ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕವಾಗಿದೆ. ಮಹಿಳಾ ಮೀಸಲಾತಿ ಬಿಲ್ ಅಂಗೀಕಾರಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದಂತ ಅವರು, ಮಹಿಳೆಯರ ಹಿತಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.ಬೇಟಿ ಬಚಾವೋ, ಬೇಟಿ ಪಡಾವೋ ಸೇರಿ ಹಲವು ಯೋಜನೆಗಳು ಜಾರಿಗೊಳಿಸಲಾಗಿದೆ ಎಂದರು.
ಬಿಜೆಪಿ ಕುಟುಂಬದ ಸದಸ್ಯನಂತೆ ಸಮಸ್ಯೆಗಳನ್ನು ಪರಿಹರಿಸುತ್ತಿದೆ. ದೇಶದ ಎಲ್ಲಾ ತಾಯಂದಿರು, ಸಹೋದರಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪೂರ್ಣ ಬಹುಮತದೊಂದಿಗೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕಾಗಿ ಅಭಿನಂದನೆಗಳು ಅಂತ ಹೇಳಿದರು.
ಮುಂದಿನ ದಿನಗಳಲ್ಲಿ ಮಹಿಳಾ ಮೀಸಲಾತಿ ಬಿಲ್ ಬಗ್ಗೆ ಚರ್ಚೆ ನಡೆಯಲಿದೆ. ದೇಶದ ತಾಯಂದಿರು, ಸಹೋದರಿಯರು ಆಶೀರ್ವಾದ ಮಾಡ್ತಿದ್ದಾರೆ. ಇಂತಹ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳುವ ಅವಕಾಶ ಬಿಜೆಪಿಗೆ ಸಿಕ್ಕಿದೆ. ನಾವು ಯಾವ ಗ್ಯಾರಂಟಿ ನೀಡಿದ್ದೇವೋ ಅವೆಲ್ಲ ಈಗ ನೀವು ಕಾಣ್ತಿದ್ದೀರಿ. ಮಹಿಳಾ ಮೀಸಲಾತಿ ಬಿಲ್ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕ ಅಂತ ತಿಳಿಸಿದರು.
ನಾನು ಭಾರತದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರನ್ನು ಅಭಿನಂದಿಸುತ್ತೇನೆ. ಸೆಪ್ಟೆಂಬರ್ 21 ಮತ್ತು 22 ರಂದು ಹೊಸ ಇತಿಹಾಸವನ್ನು ಸೃಷ್ಟಿಸುವುದನ್ನು ನಾವು ನೋಡಿದ್ದೇವೆ. ಈ ಇತಿಹಾಸವನ್ನು ರಚಿಸಲು ಜನರು ನಮಗೆ ಈ ಅವಕಾಶವನ್ನು ನೀಡಿರುವುದು ನಮ್ಮ ಸೌಭಾಗ್ಯ ಎಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ನಾರಿ ಶಕ್ತಿ ವಂದನ್-ಅಭಿನಂದನ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೇಳಿದರು.
ಕೆಲವು ನಿರ್ಧಾರಗಳು ದೇಶದ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿವೆ. ಅಂತಹ ಒಂದು ನಿರ್ಧಾರಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎಂದು ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ಮೋದಿ ಹೇಳಿದರು.
ಈ ಕಾನೂನಿನ ಮೂಲಕ ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಕಳೆದ ಮೂರು ದಶಕಗಳಿಂದ ಪ್ರಯತ್ನಗಳನ್ನು ಮಾಡುತ್ತಿದೆ. ಇದು ನಮ್ಮ ಬದ್ಧತೆಯಾಗಿತ್ತು. ಇಂದು ನಾವು ಅದನ್ನು ಪೂರೈಸಿದ್ದೇವೆ ಎಂದರು.