Ad imageAd image

ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ 

Bharath Vaibhav
ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ 
WhatsApp Group Join Now
Telegram Group Join Now

ಮೈಸೂರು: ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೆರವೇರಲಿದೆ. ಬೆಳಗ್ಗೆ 9:15 ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ನೆರವೇರಿಸಲಾಗುವುದು.

ಹಿರಿಯ ಸಾಹಿತಿ ಪ್ರೊ. ಹಂ.ಪ. ನಾಗರಾಜಯ್ಯ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಹೆಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ. ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ. ಚಾರ್ಜ್, ಈಶ್ವರ್ ಖಂಡ್ರೆ ಮೊದಲಾದವರು ಭಾಗವಹಿಸಲಿದ್ದಾರೆ. ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!