ಬೆಂಗಳೂರು: ರಾಜ್ಯ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ಕೊಟ್ಟ ಮಾತನ್ನ ಉಳಿಸಿಕೊಂಡಿದೆ.ನಿಮ್ಮೆಲ್ಲರ ಋಣ ತೀರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದಿದ್ದಾರೆ.ಈ ಮಧ್ಯೆ ಡಿಕೆ ಅಚ್ಚರಿಯ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಭೈರದೇವನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಆಯೋಜಿಸಿದ್ದ ಈ ಸಮಾವೇಶದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಡಿಸಿಎಂ, ನಮ್ಮ ಸರ್ಕಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದಿದ್ದಾರೆ.
ಆದ್ರೆ ಸಮಸ್ಯೆ ಇದ್ದರೂ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ.ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷ ಹೋರಾಡುತ್ತಿದೆ,ಹಾಲಿನ ದರ ಹೆಚ್ಚಿಸಿ ರೈತರಿಗೆ ಅನುಕೂಲ ಮಾಡಿದ್ದೇವೆ.ಇಂಧನ ದರ ಏರಿಕೆ ಬಗ್ಗೆ ಹೋರಾಟ ಮಾಡಿಲ್ಲ ಅವರು ಬಿಜೆಪಿ ರೈತರ ವಿರುದ್ಧ ಹೋರಾಟ ಮಾಡುತ್ತಿದೆ ಎಂದಿದ್ದಾರೆ.
ಇನ್ನು ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ನಮ್ಮ ಸರ್ಕಾರ ತೆಗೆಯಬೇಕು ಎನ್ನುವ ಪ್ರಯತ್ನ ನಡೀತಿದೆ. ಸರ್ಕಾರ ತೆಗೆಯುವ ಕನಸು ಕಾಣುತ್ತಿದ್ದಾರೆ.ಅದು ಅವರ ಕೈಯಲ್ಲಿ ಆಗುವುದಿಲ್ಲ ಎಂದು ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಇನ್ನು 2028ಕ್ಕೆ ಕೂಡ ರಾಜ್ಯದಲ್ಲಿ ನಾವೆ ಅಧಿಕಾರಕ್ಕೆ ಬರುತ್ತೇವೆ ಎಂದು ಡಿಕೆ ಘೋಷಿಸಿದ್ದಾರೆ.